ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಒತ್ತಡಕ್ಕೆ ಮಣಿದು ಇಬ್ಬರು ಮಂತ್ರಿಗಳು ಈ ರೀತಿ ಮಾತಾಡ್ತಿದ್ದಾರೆ

ಬೆಳಗಾವಿ : ವಿಜಯಪುರ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ್​ ಅವರು ಕಾಂಗ್ರೆಸಿನ ಬಿ ಟೀಂ ಎಂಬ ಸಚಿವ ಮುರಗೇಶ್​ ನಿರಾಣಿ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಒತ್ತಡಕ್ಕೆ ಮಣಿದು ನಿರಾಣಿ ಅವರು ಈ ರೀತಿ ಆರೋಪ ಮಾಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಕಳೆದ 27 ವರ್ಷಗಳಿಂದ ಹೋರಾಟ ನಡೆದಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಮಾವೇಶ ಕಾಂಗ್ರೆಸ್ ಪ್ರಾಯೋಜಿತ ಎಂಬ ನಿರಾಣಿ ಹೇಳಿಕೆ ಸತ್ಯಕ್ಕೆ ದೂರವಾಗಿದೆ‌. ಇದು ಸಮಾಜದ ಸಮಾವೇಶ, ಸಮಾಜದ ಕೆಲಸವಾಗಿದೆ. ಯಾವುದೇ ಪಕ್ಷಕ್ಕೆ ಅನುಕೂಲವಾಗಲಿ ಎಂದು ನಾವು ಹೋರಾಟ, ಸಮಾವೇಶ ಮಾಡುತ್ತಿಲ್ಲ ಎಂದರು. ಸಮಾಜದ ಯುವಕ-ಯುವತಿಯರಿಗೆ ಅನುಕೂಲ ಆಗಬೇಕೇಂಬ ಉದ್ದೇಶ ನಮ್ಮದಾಗಿದೆ. ಮುರಗೇಶ ನಿರಾಣಿ ಹಾಗೂ ಸಿ ಸಿ ಪಾಟೀಲ್​ ಸಚಿವರಾಗಿದ್ದಾರೆ. ಈಗಾಗಲೇ ಸಿಎಂ ಕೂಡ ವರದಿ ನೀಡುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದಷ್ಟು ಬೇಗ ವರದಿ ಪಡೆದು ಸಮಾಜಕ್ಕೆ ಸಹಾಯ ಮಾಡುವ ಕೆಲಸವನ್ನು ಇಬ್ಬರು ಸಚಿವರು ಮಾಡಬೇಕು. ಮಾರ್ಚ್ 4ರ ನಂತರ ನಮ್ಮ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೂ ಮುನ್ನವೇ 2ಎ ಮೀಸಲಾತಿ ಸಿಗುವ ರೀತಿ ಕೆಲಸ ಮಾಡಬೇಕು. ಇದಾದ ಬಳಿಕ ಓಬಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸು ಕೂಡ ಮಾಡಬೇಕೆಂದು ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

Edited By : Nagaraj Tulugeri
PublicNext

PublicNext

23/02/2021 05:48 pm

Cinque Terre

65.5 K

Cinque Terre

1

ಸಂಬಂಧಿತ ಸುದ್ದಿ