ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಸಜ್ಜು

ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿ ರಾಜ್ಯಾದ್ಯಂತ 100 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವ ಸಂಬಂಧಪಟ್ಟ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸಮಾಲೋಚನೆ ನಡೆಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಭೆ ಸೇರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ನಾಯಕ ರಮೇಶ್‍ ಕುಮಾರ್, ಮಾಜಿ ಸಚಿವ ಕೃಷ್ಣ ಭೈರೇಗೌಡ, ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಸೇರಿದಂತೆ ಅನೇಕ ನಾಯಕರು ಪ್ರವಾಸ ಕಾರ್ಯಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ.

ಮೊದಲ ಹಂತದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಕಾಂಗ್ರೆಸ್ ಅಭ್ಯರ್ಥಿಗಳ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅಲ್ಲಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಎರಡನೆ ಹಂತದಲ್ಲಿ ಹಾಲಿ ಶಾಸಕರ ಕ್ಷೇತ್ರಗಳಲ್ಲಿ ಬಹಿರಂಗ ಸಭೆಗಳನ್ನು ನಡೆಸಲಾಗುವುದು. ಇಂದು ನಡೆದ ಸಭೆಯಲ್ಲಿ ಪ್ರವಾಸದ ವೇಳೆ ಯಾವುದೇ ರೀತಿಯ ಭಿನ್ನಮತಗಳು ಕಾಣಿಸಿಕೊಳ್ಳಬಾರದು ಎಂಬ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗಿದೆ.

Edited By : Nagaraj Tulugeri
PublicNext

PublicNext

23/02/2021 09:46 pm

Cinque Terre

85.6 K

Cinque Terre

8

ಸಂಬಂಧಿತ ಸುದ್ದಿ