ಬೆಂಗಳೂರು: ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಗಳಿಂದ ಸಚಿವ ಸುಧಾಕರ್ ಮಾಮೂಲಿ ಪಡೆಯುತ್ತಿದ್ದಾರೆ. ಕ್ವಾರಿಗಳ ವಿಚಾರದಲ್ಲಿ ಸ್ಥಳೀಯವಾಗಿ ಏನೇನು ನಡೆಯುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಜಿಲೆಟಿನ್ ಸ್ಫೋಟ ದುರಂತ ಘಟನೆ ನಡೆದಿರುವ ಕ್ವಾರಿ ಸಹ ಅವರ ಸಂಬಂಧಿಕರದೇ ಆಗಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಮಾದರಿಯಲ್ಲೇ ಚಿಕ್ಕಬಳ್ಳಾಪುರದಲ್ಲಿ ಇಂದು ಸ್ಫೋಟ ನಡೆದಿದೆ. ಈ ಕ್ವಾರಿ ನಡೆಸುತ್ತಿರೋದು ಮಂತ್ರಿಗಳ ಸಂಬಂಧಿಕರು ಎಂಬ ಮಾಹಿತಿ ಇದೆ. ಇದರ ಹಿಂದಿರುವ ರಾಜಕಾರಣಿಗಳ ಪಾತ್ರದ ಬಗ್ಗೆ ತನಿಖೆ ಆಗಬೇಕು. ಈ ಸರ್ಕಾರ ಬರೀ ಲೂಟಿ ಮಾಡುವುದರಲ್ಲಿ ಮಗ್ನವಾಗಿದೆ ಐದಾರು ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
PublicNext
23/02/2021 10:29 pm