ಬೆಳಗಾವಿ: ಬೆಳಗಾವಿಯ ಸಾಹುಕಾರ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡಿದ್ದು ನಾನೇ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೇ ಮಂತ್ರಿ ಮಾಡಿದ್ದು, ನಾವೇ ಹೈಕಮಾಂಡ್ ಗೆ ಶಿಫಾರಸು ಮಾಡಿದ್ದು ಎಂದರು.
ಗ್ರಾಮೀಣದಲ್ಲಿ ಹೆಬ್ಬಾಳಕರ್ ರನ್ನು ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಅವರು ತಿರುಗೇಟು ನೀಡಿದರು. ಮಂತ್ರಿ ಮಾಡಿದ್ದೇನೆ ಎಂಬ ನನ್ನ ಹೇಳಿಕೆ, ನನ್ನನ್ನು ಗೆಲ್ಲಿಸಿದ್ದಾರೆ ಎಂಬ ಅವರ ಹೇಳಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡಬಾರದು. ನಾನು ಅಹಂ ಬ್ರಹ್ಮಾಸ್ಮಿ, ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂತೆ ಹೋಗಿದ್ದಾರೆ. ನಾನು ನಗಣ್ಯ, ಲಕ್ಷ್ಮೀ ಹೆಬ್ಬಾಳಕರ್ ಗೆ ಮತದಾರರು ಗೆಲ್ಲಿಸಿದ್ದಾರೆ. ಯಾಕೆ ಇಷ್ಟೊಂದು ಟಾರ್ಗೆಟ್ ಮಾಡುತ್ತಿದ್ದಾರೆ ಅಂತ ಅವರನ್ನೇ ಕೇಳಿ ಎಂದರು.
ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಉದ್ಘಾಟನೆ ಕಾರ್ಯಕ್ರಮ ನಮ್ಮ ಅಧ್ಯಕ್ಷತೆಯಲ್ಲಿ ಆಗಬೇಕು. ಯಾರನ್ನೋ ಎಲ್ಲೆಲ್ಲೋ ಕರೆದುಕೊಂಡು ಹೋಗುತ್ತಾರೆ. ಅದಕ್ಕೆಲ್ಲ ನಾನು ಬಾಯಿ ಬಡಿದುಕೊಳ್ಳಲು ಆಗುತ್ತಾ? ಗೋಕಾಕ ಮತದಾರರು ಕೈಜೋಡಿಸುವುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ನೀವು ಎಷ್ಟು ವಿರೋಧ ಮಾಡುತ್ತೀರೋ ನಾನು ಅಷ್ಟು ಗಟ್ಟಿಯಾಗುತ್ತೇನೆ. ಯಾರು ಏನೇ ಒದರಾಡಿದರೂ ದೇವಸ್ಥಾನ ಹಾಳಾಗುವುದಿಲ್ಲ ಎಂದು ಜಾರಕಿಹೊಳಿಗೆ ಹೆಬ್ಬಾಳಕರ್ ಟಾಂಗ್ ನೀಡಿದರು.
PublicNext
24/02/2021 01:01 pm