ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ವಾಕ್ಸಮರಕ್ಕೆ ಕುಂದಾನಗರಿ ಸಾಕ್ಷಿಯಾಗಿದೆ. ರಮೇಶ್ ಜಾರಕಿಹೊಳಿ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಹೆಬ್ಬಾಳ್ಕರ್, ಯಾರೇನೇ ಹೇಳಿದರೂ ದೇವಸ್ಥಾನ ಹಾಳಾಗಲ್ಲ. ಕ್ಷೇತ್ರದ ಜನತೆ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಮುಂದಿನ ಬಾರಿ ಗೋಕಾಕ್ ನಿಂದ ಸ್ಪರ್ಧೆ ಮಾಡುವಂತೆ ಅಲ್ಲಿನ ಜನ ಒತ್ತಾಯ ಮಾಡ್ತಿದ್ದಾರೆ. ಬಹುತೇಕರು ಕರೆ ಮಾಡಿ ಮಾತನಾಡಿದ್ದಾರೆ. ಇದೇ ವಿಚಾರವಾಗಿ ಬೆಂಗಳೂರಿಗೂ ಬಂದು ಭೇಟಿಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಶಾಸಕರನ್ನ ಗೆಲ್ಲಿಸುವ ಜವಾಬ್ದಾರಿ ನನಗೂ ಕೊಟ್ಟಿದ್ದಾರೆ. ನಾವೆಲ್ಲ ಹೈಕಮಾಂಡ್ ಮುಂದೆ ಕಾರ್ಯಕರ್ತರು, ಹೈಕಮಾಂಡ್ ಸೂಚನೆ ಮೇರೆಗೆ ಕೆಲಸ ಮಾಡುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
PublicNext
24/02/2021 04:51 pm