ಬೆಳಗಾವಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಗೋಕಾಕ್ ನಲ್ಲಿ ಬೃಹತ್ ಪ್ರತಿಭಟನೆ ಗೋಕಾಕ: ರೈತ ವಿರೋಧಿ ಕಾನೂನುಗಳು, ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಗೋಕಾಕ ಹಾಗೂ ಅರಭಾವಿ ವಿಧಾನಸಭಾ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಎತ್ತಿನ ಬಂಡಿಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಸಾವಿರಾರು ಕಾರ್ಯಕರ್ತರು ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇವರು ಭಾಗವಹಿಸಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
PublicNext
24/02/2021 06:12 pm