ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್-ಜೆಡಿಎಸ್ ನಡುವೆ ಒಪ್ಪಂದವಾಗಿದೆ

ಬೆಂಗಳೂರು: ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ 3 ವರ್ಷ ಮೇಯರ್ ಸ್ಥಾನ ಎಂದು ನಿರ್ಧರಿಸಲಾಗಿತ್ತು. ಆ ಪ್ರಕಾರ ಜೆಡಿಎಸ್ ನಡೆದುಕೊಳ್ಳಲಿದೆ ಎಂದು ಭಾವಿಸಿದ್ದೇವೆ. ನಾವು ನಮ್ಮ ಮಾತಿಗೆ ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಮುರಿಯುವ ವಿಚಾರವಾಗಿ ಯಾರು ಏನು ಹೇಳಿದ್ದಾರೆ, ಏನು ಮಾಡಿದ್ದಾರೆ ಎಂಬುದನ್ನು ಪ್ರತ್ಯಕ್ಷವಾಗಿ ನೋಡಿ ತಿಳಿಯುವವರೆಗೂ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ಅದಕ್ಕಾಗಿ ಯಾರ ಜೊತೆ ಬೇಕಾದರೂ ಮಾತನಾಡುತ್ತೇನೆ. ಯಾರೂ ಕೂಡ ನನ್ನ ಮೇಲೆ ನಿರ್ಬಂಧ ಹೇರಿಲ್ಲ. ನಮಗೆ ಪಕ್ಷದ ತತ್ವ, ನಿಲುವು ಮುಖ್ಯ ಎಂದರು.

Edited By : Nagaraj Tulugeri
PublicNext

PublicNext

24/02/2021 07:02 pm

Cinque Terre

64.58 K

Cinque Terre

0

ಸಂಬಂಧಿತ ಸುದ್ದಿ