ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವಲ್ಲಿ ಬಳಿ ನಡೆದ ಜಿಲೆಟಿನ್ ಸ್ಪೋಟ ಪ್ರಕರಣದಲ್ಲಿ 'ನಮ್ಮಮಾವನ ಮಕ್ಕಳು ಯಾರೂ ಇಲ್ಲ' ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ನಂದಿ ಬೆಟ್ಟದ ಅಭಿವೃದ್ದಿ ವಿಚಾರವಾಗಿ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಸ್ಪೋಟಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಈಗಾಗಲೇ 24 ಗಂಟೆ ಒಳಗಾಗಿ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಅಧಿಕಾರ ನಿರ್ಲಕ್ಷ್ಯದ ಆರೋಪದ ಮೇರೆಗೆ ಇಬ್ಬರು ಪೊಲೀಸರನ್ನು ಸಹ ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಇನ್ನಷ್ಟು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ತಿಳಿಸಿದರು.
PublicNext
25/02/2021 06:53 pm