ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಡ್ಡ ಬಿಟ್ರೆ ಟ್ಯಾಗೋರ್ ಆಗಲ್ಲ, ಆರ್ಮಿ ಡ್ರೆಸ್ ಹಾಕಿದ್ರೆ ಬೋಸ್ ಆಗಲ್ಲ: ಎಚ್.ಕೆ ಪಾಟೀಲ್ ವಾಗ್ದಾಳಿ

ಗದಗ: ಬೆಲೆ ಏರಿಕೆ ಹಾಗೂ ನೂತನ ಕೃಷಿ ಕಾಯ್ದೆ ವಿರುದ್ಧ ನಗರದಲ್ಲಿ ಇಂದು ಟ್ರ್ಯಾಕ್ಟರ್ ರ್ಯಾಲಿ ನಂತರ ಪ್ರಧಾನಿ ಮೋದಿ ವಿರುದ್ಧ ಹಿರಿಯ ಶಾಸಕ ಹೆಚ್.ಕೆ ಪಾಟೀಲ್ ವಾಗ್ದಾಳಿ ನಡೆಸಿದರು.

ಮೋದಿ ಅವರೇ, ಗಡ್ಡ ಬಿಟ್ರೆ, ನೀವು ರವೀಂದ್ರನಾಥ ಟ್ಯಾಗೋರ್ ಆಗಲ್ಲ. ಆರ್ಮಿ ಡ್ರೆಸ್ ಹಾಕಿದರೆ ನೀವು ಸುಭಾಷ್ ಚಂದ್ರ ಬೋಸ್ ಆಗುವುದಿಲ್ಲ. ಕೈ ಎತ್ತಿ ತೋರಿಸಿದರೆ ಬಿ.ಆರ್.ಅಂಬೇಡ್ಕರ್ ಆಗುವುದಿಲ್ಲ. ಹೆಗಲ ಮೇಲೆ ಶಾಲು ಹಾಕಿದರೆ ಸರ್ದಾರ್ ವಲ್ಲಭಭಾಯ್ ಪಟೇಲ್ ಆಗುವುದಿಲ್ಲ. ಜನಕ್ಕೆ ಕೊಟ್ಟ ಮಾತನ್ನ ಈಡೇರಿಸಿದಾಗ ಮಾತ್ರ ಜನ ನಿಮ್ಮನ್ನು ನಂಬುತ್ತಾರೆ ಎಂದು ಪ್ರಧಾನಿ ಮೇಲೆ ಎಚ್. ಕೆ ಪಾಟೀಲ್ ವಾಕ್ ಪ್ರಹಾರ ನಡೆಸಿದ್ದಾರೆ.

ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ವಚನ ಭ್ರಷ್ಟರಾಗಿದ್ದೀರಿ. ಇದೇ ರೀತಿ ಸುಳ್ಳು ಹೇಳುತ್ತ ದೇಶದ ಜನರಿಗೆ ಎಷ್ಟು ದಿನ ಮೋಸ ಮಾಡುತ್ತೀರಿ. ನೀವು ಖುರ್ಚಿ ಖಾಲಿ ಮಾಡುವ ಕಾಲ ಬಂದೇ ಬರುತ್ತದೆ. ಲಾಕ್‍ಡೌನ್ ನಿಂದ ಬೆಲೆ ಏರಿಕೆ ನಿಮ್ಮ ಸರ್ಕಾರಕ್ಕೆ ಮಾತ್ರ ಆಗಿದೆನಾ? ಲಾಕ್‍ಡೌನ್ ನಿಂದ ಜನಸಾಮಾನ್ಯರಿಗೆ ತೊಂದರೆ ಆಗಿಲ್ವಾ? ಜನ ಸಾಮಾನ್ಯರಿಗೊಂದು ನ್ಯಾಯ, ಸರ್ಕಾರದ ಆದಾಯಕ್ಕೊಂದು ನ್ಯಾಯನಾ? ಕೊರೊನಾ ಹೊಡೆತಕ್ಕೆ ಸಿಕ್ಕು ಜನ ತತ್ತರಿಸಿದ್ದಾರೆ. ಇಂತಹ ಸಂದಿಗ್ಧತೆಯಲ್ಲಿ ಜನಸಾಮಾನ್ಯರನ್ನು ಯಾಕೆ ಸುಲಿಗೆ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

Edited By : Nagaraj Tulugeri
PublicNext

PublicNext

25/02/2021 08:59 pm

Cinque Terre

117.11 K

Cinque Terre

54