ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಕಾನೂನು ತಜ್ಞರ ಜೊತೆ ಸಿಎಂ ಮಾತುಕತೆ: ಸದ್ಯದಲ್ಲೇ ಸೂಕ್ತ ನಿರ್ಧಾರ ಎಂದ ಬೊಮ್ಮಾಯಿ

ದಾವಣಗೆರೆ: ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿದ್ದಾರೆ. ಸದ್ಯದಲ್ಲಿಯೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ವಾಲ್ಮೀಕಿ, ಪಂಚಮಸಾಲಿ, ಕುರುಬ ಸೇರಿದಂತೆ ಕೆಲ ಸಮುದಾಯಗಳು ಮನವಿ ಸಲ್ಲಿಸಿವೆ. ತಮಿಳುನಾಡಿನಲ್ಲಿ ಮೀಸಲಾತಿ ಪ್ರಮಾಣ ಶೇ. 50 ಮೀರಿದೆ. ಈ ವೇಳೆ ಇದನ್ನು ಕೇಂದ್ರ ಸರ್ಕಾರ ಶಡ್ಯೂಲ್ 19 ರಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಅವಕಾಶ ನೀಡಿದೆ. ಕೆಲ ಸುಪ್ರೀಂ ಕೋರ್ಟ್ ತೀರ್ಪುಗಳು ಸಹ ಬಂದಿವೆ. ಈ ಎಲ್ಲ ವಿಚಾರಗಳನ್ನ ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೇಂದ್ರದಲ್ಲಿ ಎಸ್ಸಿ ಮತ್ತು ಎಸ್ಟಿ ಪ್ರತ್ಯೇಕ ಆಯೋಗಗಳಿವೆ. ಜೊತೆಗೆ ಹಿಂದುಳಿದ ವರ್ಗಗಳ ಆಯೋಗವು ಇದೆ. ಇವುಗಳಿಗೆ ಮನವಿ ಸಲ್ಲಿಸಿ ಸೂಕ್ತ ಸಲಹೆ ಪಡೆಯಲಾಗುವುದು.ಈಗ ಮನವಿ ಸಲ್ಲಿಸಿದ ಎಲ್ಲಾ ಜಾತಿಯವರಿಗೆ ಸೂಕ್ತ ನ್ಯಾಯ ಒದಗಿಸುವ ಬಗ್ಗೆ ಸಿಎಂ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

Edited By : Manjunath H D
PublicNext

PublicNext

26/02/2021 01:58 pm

Cinque Terre

62.82 K

Cinque Terre

0

ಸಂಬಂಧಿತ ಸುದ್ದಿ