ಮೈಸೂರು: ನಗರದ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ 'ಕೈ' ಶಾಸಕ ತನ್ವೀರ್ ಸೇಠ್ ಅವರಿಗೆ ನೋಟಿಸ್ ನೀಡಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸೇಠ್ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಒಪ್ಪಂದ ಬಗೆಗಿನ ನಿರ್ಧಾರ ನನ್ನದು. 1983ರಿಂದ ಬಿಜೆಪಿಗೆ ಮೇಯರ್ ಗದ್ದುಗೆ ಸಿಗದಂತೆ ನೋಡಿಕೊಂಡಿದ್ದೇವೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಂತೆ ಮಾಡಿದ್ದೇವೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿಲ್ಲ ಎಂದು ತನ್ವೀರ್ ಸೇಠ್ ಸ್ಪಷ್ಟಪಡಿಸಿದ್ದಾರೆ.
ನನಗಿನ್ನೂ ನೋಟಿಸ್ ಕೈ ಸೇರಿಲ್ಲ. ನೋಟಿಸ್ ಬಂದಿದೆ ಎಂಬ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಅದಕ್ಕೆಲ್ಲ ಉತ್ತರ ನೀಡಲು ನಾನು ತಯಾರಿದ್ದೇನೆ. ಸಿದ್ದರಾಮಯ್ಯ ಅವರು ಪಕ್ಷ ಕುಂಠಿತಗೊಳಿಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತನ್ವೀರ್ ಸೇಠ್ ಅಸಮಾಧಾನಿತರಾಗಿದ್ದಾರೆ.
PublicNext
26/02/2021 03:12 pm