ರಾಮನಗರ: ಬಿಜೆಪಿಯಿಂದ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ. ಏನು ನಾವು ನೋಡದೇ ಇರೋ ಬಿಜೆಪಿನಾ? ಕರ್ನಾಟಕದಲ್ಲಿ ಬಿಜೆಪಿಗೆ ಲೈಫ್ ಕೊಟ್ಟಿದ್ದೇ ನಾನು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2006ರಲ್ಲಿ ಎಲ್ಲ ಮಂಗನ ರೀತಿ ಹಾರಲು ರೆಡಿಯಾಗಿದ್ದರು. ಅವತ್ತು, ಬಿಜೆಪಿಯನ್ನು ಉಳಿಸಿದ್ದು ನಾನು. ಆಗ ಇದೇ ಯಡಿಯೂರಪ್ಪನವರು ನಮ್ಮ ಪಕ್ಷಕ್ಕೆ ಅರ್ಜಿ ಹಾಕೊಂಡು ನನ್ನತ್ತಿರ ಬಂದಿದ್ದರು. ನನಗೆ ಮಂತ್ರಿ ಮಾಡಿ ಬಿಜೆಪಿಗೆ ರಾಜೀನಾಮೆ ಕೊಡ್ತೀನಿ ಎಂದು ಬಂದಿದ್ದರು ಎಂದರು.
ಇದಲ್ಲದೇ, ರಾಮನಗರ ಜಿಲ್ಲೆಯಲ್ಲಿ ನನ್ನನ್ನು ಖಾಲಿ ಮಾಡಿಸಲು ಎಲ್ಲಾ ನಿಂತಿದ್ದಾರೆ. ಆದರೆ, ದೇವೇಗೌಡರ ಕುಟುಂಬದ ಕೊಡುಗೆ ಜಿಲ್ಲೆಯ ಜನರಿಗೆ ಗೊತ್ತಿದೆ. ನಾನು ಬಂಡೆ ಹೊಡೆದಿಲ್ಲ, ಜನರ ಹಣ ಲೂಟಿ ಮಾಡಿಲ್ಲ. ನನ್ನನ್ನು ಖಾಲಿ ಮಾಡಿಸಲು ಬಂದವರು ಅವರೇ ಖಾಲಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.
PublicNext
26/02/2021 04:56 pm