ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚ ರಾಜ್ಯಗಳಲ್ಲಿ ಚುನಾವಣೆ ದಿನಾಂಕ ನಿಗದಿ: ಶುರುವಾಯ್ತು ರಾಜಕೀಯ ಲೆಕ್ಕಾಚಾರ

ನವದೆಹಲಿ: ಐದು ರಾಜ್ಯಗಳ ವಿಧಾನ ಸಭಾ ಚುನಾವಣಾ ಕುತೂಹಲಕ್ಕೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ಮೂಲಕ ಉತ್ತರ ನೀಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ವಿಧಾನ ಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯುಕ್ತ ಸುನೀಲ್ ಅರೋರ ಸುದ್ದಿಗೋಷ್ಟಿಯಲ್ಲಿ ಘೋಷಿಸಿದ್ದಾರೆ. ಐದು ರಾಜ್ಯಗಳ ಚುನಾವಣೆ ಮೇ.24 ರಿಂದ ಜೂನ್ 8 ರವರೆಗೆ ನಡೆಯಲಿದೆ ಎಂದು ಆಯೋಗ ಹೇಳಿದೆ.

ಕೇರಳ ಹಾಗೂ ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 6ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಮಾರ್ಚ್ 27, ಏಪ್ರಿಲ್ 1 ರಂದು 2ನೇ ಹಂತ, ಏಪ್ರಿಲ್ 6ರಂದು 3ನೇ ಹಂತದ ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣೆಗಳ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ.

5 ರಾಜ್ಯಗಳ 824 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 18.6 ಕೋಟಿ ಮತದಾರರು ಈ ಬಾರಿಯ ಹಕ್ಕು ಚಲಾಯಿಸುವ ಅವಕಾಶ ಪಡೆದುಕೊಂಡಿದ್ದಾರೆ ಎಂದು ಆಯೋಗ ಹೇಳಿದೆ.

Edited By : Nagaraj Tulugeri
PublicNext

PublicNext

26/02/2021 05:13 pm

Cinque Terre

98.96 K

Cinque Terre

16