ಹಾಸನ: ಕಾಂಗ್ರೆಸ್ ಮುಕ್ತ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದಾಗ ಎಲ್ಲರೂ ನಕ್ಕಿದ್ದರು. ಈಗ ಆ ಮಾತು ನಿಜವಾಗಿದೆ. ಒಂದು ರಾಜ್ಯ ಬಿಟ್ಟರೆ ಕಾಂಗ್ರೆಸ್ ಪಕ್ಷ ಬೇರೆಡೆ ಎಲ್ಲಿದೆ? ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆದಿದೆ. ನರೇಂದ್ರ ಮೋದಿ ಕಾಲದಲ್ಲಿ 23 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದೆ, ಇಂದು ಐದು ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆ ಆಗಲಿದ್ದು, ಹೆಚ್ಚಿನ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ನನ್ನಿಂದಲೇ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದ ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ ಎಂದು ಗೋವಿಂದ್ ಕಾರಜೋಳ ಹೇಳಿದರು.
PublicNext
26/02/2021 07:27 pm