ಬೆಳಗಾವಿ: ತೈಲ ಬೆಲೆ ಏರಿಕೆಯಿಂದ ಮುಂಬರುವ ಐದು ರಾಜ್ಯಗಳ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೇ ತೈಲ ಬೆಲೆ ಏರಿಕೆಯಾಗಿದೆ. ಇದರಿಂದ ದೇಶದಲ್ಲೂ ಇಂಧನ ಬೆಲೆ ಹೆಚ್ಚಳವಾಗಿದೆ. ತೈಲ ಬೆಲೆ ಏರಿಕೆಯಿಂದ ಅಗತ್ಯವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಂತೆ ತೈಲ ಬೆಲೆ ಏರಿಕೆ, ಇಳಿಕೆ ಆಗುತ್ತದೆ. ತೈಲ ಬೆಲೆ ಏರಿಕೆ ಪರಿಣಾಮ ಕೇವಲ ಒಂದೇ ರಾಜ್ಯದ ಮೇಲಾಗಿಲ್ಲ. ದೇಶದ ಎಲ್ಲ ರಾಜ್ಯಗಳ ಜನರ ಮೇಲೂ ಪರಿಣಾಮ ಬೀರಿದೆ ಎನ್ನುವ ಮೂಲಕ ಬೆಲೆ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.
PublicNext
27/02/2021 07:35 am