ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಹಲವು ರಾಜಕೀಯ ನಾಯಕರು ಶುಭ ಹಾರೈಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಯಡಿಯೂರಪ್ಪ ಅವರು ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ಅವರು ರೈತರ ಕಲ್ಯಾಣ ಮತ್ತು ಬಡವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ'' ಎಂದು ಶುಭ ಕೋರಿದ್ದಾರೆ.
''ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕರ್ನಾಟಕದ ಬಡವರು ಮತ್ತು ರೈತರ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಶ್ಲಾಘನೀಯ. ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಟ್ವೀಟ್ ಮಾಡಿ, ''ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ'' ಎಂದು ಶುಭ ಕೋರಿದ್ದಾರೆ.
PublicNext
27/02/2021 02:26 pm