ದಾವಣಗೆರೆ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಹರಪನಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು.
ಹರಪನಹಳ್ಳಿ ಪಟ್ಟಣದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕ ಹಾಗೂ ಮಾಜಿ ಸಚಿವ ಪಿ. ಟಿ. ಪರಮೇಶ್ವರ್ ನಾಯ್ಕ್ ಸೇರಿದಂತೆ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯ ಮೂಲಕ ಆಗಮಿಸಿದ್ದು ವಿಶೇಷವಾಗಿತ್ತು.
ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಸೂದೆ ಮಂಡಿಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಕೈಬಿಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪಿ. ಟಿ. ಪರಮೇಶ್ವರ್ ನಾಯ್ಕ್ ಭವಿಷ್ಯ ನುಡಿದರು.
PublicNext
27/02/2021 07:29 pm