ವಿಜಯಪುರ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಆದರೆ ಈ ಮಧ್ಯೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿ ಟಿಕೆಟ್ ಆಕಾಂಕ್ಷೆ ಹೊರ ಹಾಕಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಬಯಸಿದ್ದೇನೆ. ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ. ಮೂರು ವರ್ಷ ಅವಧಿಯಲ್ಲಿ ನಾನು ಸೇವೆ ಸಲ್ಲಿಸಲು ಬಯಸಿದ್ದೇನೆ. ಬಿಜೆಪಿ ಹೈಕಮಾಂಡ್ ನಂಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನಂಗೆ ಅವಕಾಶ ಕೊಡದಿದ್ದರೂ ನಾನು ಬಿಜೆಪಿ ಗೆಲುವಿಗೆ ಶ್ರಮಿಸುತ್ತೇನೆ. ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುವೆ ಎಂದು ಹೇಳಿದ್ದಾರೆ.
PublicNext
27/02/2021 09:19 pm