ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿ

ತಿರುವನಂತಪುರಂ: ಕೇರಳದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿ ಮಾಡಲಾಗುವುದು ಎಂದು ಕೇರಳದ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.

ಪಾಲಕ್ಕಾಡ್‌ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶಕ್ಕಿಂತ ಕೇರಳದಲ್ಲಿ ಲವ್ ಜಿಹಾದ್ ವ್ಯಾಪಕವಾಗಿದೆ. ಅದನ್ನು ತಡೆಯಲು ಕಾನೂನಿನ ಅಗತ್ಯವಿದೆ. ರಾಜ್ಯದಲ್ಲಿ ಕ್ರೈಸ್ತ ಸಮುದಾಯವು ಆತಂಕಕ್ಕೊಳಗಾಗಿದ್ದು, ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮಕ್ಕೆ ಕೋರಿದೆ. ಇದು ಅವರಿಗೆ ತೀವ್ರ ಕಳಕಳಿಯ ಸಂಗತಿಯಾಗಿದೆ ಎಂದು ತಿಳಿಸಿದರು.

ಕೇಂದ್ರ ಚುನಾವಣಾ ಆಯೋಗವು ಐದು ರಾಜ್ಯ/ ಕೇಂದ್ರಡಾಳಿತ ಪ್ರದೇಶಗಳಿಗೆ ನಡೆಯಲಿರುವ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಿದೆ. ಕೇರಳದಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ.

Edited By : Vijay Kumar
PublicNext

PublicNext

28/02/2021 03:44 pm

Cinque Terre

88.25 K

Cinque Terre

18

ಸಂಬಂಧಿತ ಸುದ್ದಿ