ನವದೆಹಲಿ: ದೆಹಲಿಯಲ್ಲಿ ಪ್ರತಿಭಟನಾನಿರತ ರೈತರಿಗೆ ಕೇಂದ್ರ ಸರ್ಕಾರ ನೀಡಿದ ಕಿರುಕುಳಗಳನ್ನು ಬ್ರಿಟಿಷರೂ ಸಹ ನೀಡಿರಲಿಲ್ಲ. ಅಷ್ಟೇ ಅಲ್ಲದೆ ಅಲ್ಲದೇ ಹೋರಾಟ ನಿರತ ರೈತರ ಮೇಲೆ ಸುಳ್ಳು ಕೇಸುಗಳನ್ನು ದಾಖಲು ಮಾಡಲಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, ''ಅನ್ನ ನೀಡುವ ರೈತರೆಂದು ದೇಶದ್ರೋಹಿಗಳಾಗಲು ಸಾಧ್ಯವಿಲ್ಲ. ಜನವರಿ 26ರ ಕೆಂಪು ಕೋಟೆಯ ಘರ್ಷಣೆಯು ಕೇಂದ್ರ ಸರ್ಕಾರದಿಂದ ಪೂರ್ವಯೋಜಿತವಾಗಿತ್ತು. ಈ ದೇಶದ ರೈತರು ಅಸಮಾಧಾನದಲ್ಲಿದ್ದಾರೆ. 90ಕ್ಕೂ ಹೆಚ್ಚು ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 250ಕ್ಕೂ ಹೆಚ್ಚು ಜನ ಪ್ರಾಣ ತೆತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ'' ಎಂದು ವಾಗ್ದಾಳಿ ನಡೆಸಿದ್ದಾರೆ.
ಜನವರಿ 26ರ ಕೆಂಪು ಕೋಟೆಯ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಹೊರತು ರೈತರಲ್ಲ. ರೈತರಿಗೆ ದೆಹಲಿ ರಸ್ತೆಗಳ ಬಗ್ಗೆ ಹೆಚ್ಚಿನ ಪರಿಚಯವಿಲ್ಲ. ಆದರೆ ಕೇಂದ್ರ ಸರ್ಕಾರವೇ ರೈತರನ್ನು ದಾರಿ ತಪ್ಪಿಸಿತು. ದೆಹಲಿಯ ಮುಖ್ಯಮಂತ್ರಿಯಾಗಿ ಇದೆಲ್ಲದರ ಬಗ್ಗೆ ನನಗೆ ಚೆನ್ನಾಗಿ ಅರಿವಿದೆ ಎಂದು ದೂರಿದರು.
PublicNext
28/02/2021 04:51 pm