ಮುಂಬೈ: ದೇಶಾದ್ಯಂತ ಇಂಧನ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ನಾವು ಈ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮತ್ತು ಹಾಲಿ ನಾಯಕ ವಿರಾಟ್ ಕೊಹ್ಲಿ ಸೆಂಚುರಿ ಹೊಡೆಯೋದನ್ನು ಕಣ್ತುಂಬಿಕೊಳ್ಳುತ್ತಿದ್ವಿ. ಈಗ ಪೆಟ್ರೋಲ್-ಡೀಸೆಲ್ ಶತಕ ಹೊಡೆಯೋದನ್ನು ನೋಡೋ ಹಾಗಾಗಿದೆ ಎಂದು ಉದ್ಧವ್ ಠಾಕ್ರೆ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ.
PublicNext
28/02/2021 09:00 pm