ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಹೊಸ್ತಿಲಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ ಜೋರಾಗಿದೆ. ಈ ಮಧ್ಯೆ ರಮೇಶ್ ಜಾರಕಿಹೊಳಿ ಅವರು, ''ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್'' ಎಂದು ವ್ಯಂಗ್ಯವಾಡಿದ್ದಾರೆ.
ಗೋಕಾಕ್ ತಾಲೂಕಿನ ಜಮನಾಳ ಗ್ರಾಮದ ಬಳಿ ಡ್ಯಾಂ ನಿರ್ಮಾಣ ಕಾಮಗಾರಿ ವೀಕ್ಷಣೆಗೆ ಮುಳುಗಡೆಯಾಗುವ ಜಮೀನಿನ ಬಗ್ಗೆ ಸಚಿವರು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡಿದ್ದು ನಾನೇ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ''ನನ್ನ ಹಿತೈಷಿಗಳು ಆಕೆ ಬಗ್ಗೆ ಮಾತನಾಡದಂತೆ ನನಗೆ ವಾರ್ನಿಂಗ್ ಮಾಡಿದ್ದಾರೆ. ಆಕೆ ಮಾರ್ಕೆಟಿಂಗ್ ವುಮೆನ್, ಏನೇ ಮಾಡಿದರೂ ಮಾರ್ಕೆಟಿಂಗ್ ಮಾಡಿಕೊಳ್ಳುತ್ತಾಳೆ. ನನ್ನನ್ನು ಯಾರು ಮಂತ್ರಿ ಮಾಡಿದ್ದಾರೆ ಅಂತ ಮುಂದೆ ಹೇಳ್ತೇನೆ'' ಎಂದರು.
PublicNext
01/03/2021 11:58 am