ಹೈದರಾಬಾದ್: ತಿರುಪತಿ ವಿಮಾನ ನಿಲ್ದಾಣದಲ್ಲಿ ಧರಣಿಗೆ ಕುಳಿತ ಆಂಧ್ರ ಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಂದ್ರಬಾಬು ನಾಯ್ಡು ಅವರು ಚಿತ್ತೂರಿಗೆ ಚುನಾವಣಾ ಪ್ರಚಾರಕ್ಕೆ ಹೊರಟಿದ್ದರು. ಆದರೆ ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ನಾಯ್ಡು ಅವರು ವಿಮಾನ ನಿಲ್ದಾಣದಲ್ಲೇ ಕೆಲ ಕಾಲ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಹೀಗಾಗಿ ರೇಣಿಗುಂಟಾ ಪೊಲೀಸರು ಅವರನ್ನು ವಶಕ್ಕೆ ಪಡೆದರು.
PublicNext
01/03/2021 01:45 pm