ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆಯಲ್ಲಿ ನಾವೇ ಗೆಲ್ಲೋದು: ಯಡಿಯೂರಪ್ಪ

ಬೆಂಗಳೂರು: ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಬೆಳಗಾವಿ ಲೋಕಸಭಾ, ಮಸ್ಕಿ, ಬಸವಕಲ್ಯಾಣ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದೇ ಗೆಲ್ಲಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.

ಯಾವುದೇ ಸಂದರ್ಭದಲ್ಲೂ ಉಪಚುನಾವಣೆ ಎದುರಾದರೂ ನಾವು ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆ ಎಂದರು.ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತೀರಾ ಎಂಬ ಮಾಧ್ಯಮವರ ಪ್ರಶ್ನೆಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Edited By : Nagaraj Tulugeri
PublicNext

PublicNext

01/03/2021 03:24 pm

Cinque Terre

32.14 K

Cinque Terre

5

ಸಂಬಂಧಿತ ಸುದ್ದಿ