ಚೆನ್ನೈ: ಮೀನುಗಾರರ ಜೊತೆ ಸಮುದ್ರಕ್ಕೆ ಜಿಗಿದು ಎಂಜಾಯ್ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದೀಗ ವೇದಿಕೆ ಮೇಲೆ ವಿದ್ಯಾರ್ಥಿಗಳ ಜೊತೆ ಕುಣಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚುನಾವಣೆ ಸಂಬಂಧ ತಮಿಳುನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಸೇಂಟ್ ಜೋಸೆಫ್ ಹೈಯರ್ ಸೆಕೆಂಡರಿ ಸ್ಕೂಲ್ ಮುಲಾಗುಮುದಬ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿನಿಯರ ಜೊತೆ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗೆ ಸಾಥ್ ನೀಡಿದರು.
PublicNext
01/03/2021 04:35 pm