ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಕರೆದುಕೊಂಡು ದಿಲ್ಲಿಗೆ ಹೋಗುತ್ತೇನೆ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಡಿ ಕೆ ಶಿವಕುಮಾರ್ ವಿರುದ್ಧ ನಾನು ದೂರು ನೀಡುತ್ತೇನೆ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದರು.
ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೇಲೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದರು. ಪ್ರಸನ್ನ ಕುಮಾರ್ ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೆ ಆದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಒಬ್ಬ ಹಾಲಿ ಶಾಸಕ(MLA) ಇರಬೇಕಾದರೆ ಮತ್ತೊಬ್ಬ ನಾಯಕನನ್ನು ಕರೆದುಕೊಂಡು ಬಂದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಗುಂಪುಗಾರಿಕೆ ಆಗುವುದು ಸಹಜ ಎಂದರು.
PublicNext
01/03/2021 10:40 pm