ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಟ್ಟ ಬಳಿಕ ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜ್ಯದ ಜನ ಹಾಗೂ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿಂಹಾಸನ ಬಸವರಾಜ್ ಬೊಮ್ಮಾಯಿ ಪಾಲಾಗಿದೆ.
ನಿರ್ಗಮಿತ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಸವರಾಜ್ ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದೆ. ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ, ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಮದ್ ಗೆಹಲೋತ್ ನೂತನ ಸಿಎಂ ಬೊಮ್ಮಾಯಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಇಂದು ಬೊಮ್ಮಾಯಿ ಅವರು ಮಾತ್ರ ಪದಗ್ರಹಣ ಮಾಡುತ್ತಿದ್ದಾರೆ.
PublicNext
28/07/2021 07:19 am