ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಸೇರಿ ದೇಶದ 5 ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಗಿದ್ದವರ ಮಕ್ಕಳೇ 'ಸಿಎಂ'

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷವೆಂದರೆ ಕರ್ನಾಟಕ ಸೇರಿ ದೇಶದ 5 ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ನಾಯಕರ ಮಕ್ಕಳೇ 'ಸಿಎಂ' ಸ್ಥಾನ ಪಡೆದುಕೊಂಡಿದ್ದಾರೆ.

ಹೌದು. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಒಡಿಶಾ ಹಾಗೂ ಜಾರ್ಖಂಡ್ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳೇ ಅಧಿಕಾರಕ್ಕೆ ಬಂದಿದ್ದಾರೆ. ಮತ್ತೊಂದು ವಿಶೇಷ ಸಂಗತಿ ಎಂದರೆ ಕರ್ನಾಟಕದಲ್ಲಿ ತಂದೆ ಬಳಿಕ ಸಿಎಂ ಸ್ಥಾನ ಅಲಂಕರಿಸಿದ 2ನೇ ಜೋಡಿ ಬಸವರಾಜ ಬೊಮ್ಮಾಯಿ ಅವರಾಗಿದ್ದಾರೆ. ಮೊದಲು ಜೋಡಿ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಆಗಿದ್ದಾರೆ.

ಕರ್ನಾಟಕ: ಎಸ್.ಆರ್.ಬೊಮ್ಮಾಯಿ ಅವರು ಆಗಸ್ಟ್ 1988 ರಿಂದ ಏಪ್ರಿಲ್ 1989ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದೀಗ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ನೀಡಲಾಗಿದೆ.

ತಮಿಳುನಾಡು: ದಿವಗಂತ ಎಂ ಕರುಣಾನಿಧಿ 5 ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಸದ್ಯ ಅವರ ಪುತ್ರ ಎಂಕೆ ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ.

ಆಂಧ್ರ ಪ್ರದೇಶ: ಆಂಧ್ರ ಪ್ರದೇಶ ಕಂಡ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಬಿಎಸ್ ರಾಜಶೇಖರ್ ರೆಡ್ಡಿ 2004ರಿಂದ 2009ರ ವರೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಸದ್ಯ ಅವರ ಪುತ್ರ ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿದ್ದು, ಮೇ 30, 2019ರಲ್ಲಿ ಅಧಿಕಾರ ಸ್ವೀಕರಿಸಿದರು.

ಒಡಿಶಾ: ಒಡಿಶಾದ ಪ್ರಬಲ ನಾಯಕ ಬಿಜು ಪಟ್ನಾಯಕ್ 1961-1963 ಹಾಗೂ 1990-95ರಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಸದ್ಯ ಅವರ ಪುತ್ರ ನವೀನ್ ಪಟ್ನಾಯಕ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದು, ನವೀನ್ ಪಟ್ನಾಯಕ್ 5ನೇ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ.

ಜಾರ್ಖಂಡ್: ಜಾರ್ಖಂಡ್ ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೇನ್ 2ನೇ ಬಾರಿಗೆ ಸಿಎಂ ಆಗಿ ಆಡಳಿತ ನಡೆಸುತ್ತಿದ್ದು, 2ನೇ ಅವಧಿ 2019ರಲ್ಲಿ ಆರಂಭಗೊಂಡಿದೆ. ಹೇಮಂತ್ ಸೊರೇನ್ ತಂದೆ ಶಿಬು ಸೊರೆನ್ 2 ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು.

Edited By : Vijay Kumar
PublicNext

PublicNext

28/07/2021 09:06 am

Cinque Terre

58.37 K

Cinque Terre

8

ಸಂಬಂಧಿತ ಸುದ್ದಿ