ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಬಳಿಕ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರತಿಜ್ಞಾವಿಧಿ ಬೋಧಿಸಿದರು. ಸಿಎಂ ಬೊಮ್ಮಾಯಿ ಅವರು "ದೇವರ ಹೆಸರಿನಲ್ಲಿ" ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ವೇಳೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ, ಎಸ್. ಸುರೇಶ್ ಕುಮಾರ್, ವಿ. ಸೋಮಣ್ಣ, ಕೆ.ಸಿ. ನಾರಾಯಣ ಗೌಡ, ಎಂ.ಟಿ.ಬಿ. ನಾಗರಾಜ್ ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗವಹಿಸಿದ್ದರು.
PublicNext
28/07/2021 11:03 am