ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಾಯಿಗೆ ಮೋದಿ ಅಭಿನಂದನೆ: ಬಿಎಸ್‌ವೈರನ್ನು ಹಾಡಿ ಹೊಗಳಿದ ಪ್ರಧಾನಿ

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಜೊತೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ನಮ್ಮ ಪಕ್ಷಕ್ಕೆ ಮತ್ತು ಕರ್ನಾಟಕದ ಅಭಿವೃದ್ಧಿಗೆ ಬಿ.ಎಸ್. ಯಡಿಯೂರಪ್ಪ ಅವರ ಮಹತ್ವದ ಕೊಡುಗೆಗಳನ್ನು ವರ್ಣಿಸಲು ಪದಗಳೇ ಸಾಲುತ್ತಿಲ್ಲ. ದಶಕಗಳ ಕಾಲ ಅವರು ಕಷ್ಟಪಟ್ಟು ದುಡಿದು, ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರೊಂದಿಗೆ ಸಮಾವೇಶ ನಡೆಸಿದರು. ಸಾಮಾಜಿಕ ಕಲ್ಯಾಣಕ್ಕಾಗಿ ಅವರಿಗಿದ್ದ ಬದ್ಧತೆ ಮೂಲಕ ಮೆಚ್ಚುಗೆ ಪಡೆದಿದ್ದಾರೆ" ಎಂದು ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಪ್ರಧಾನಿ ಮೋದಿ, "ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದು, ರಾಜ್ಯದಲ್ಲಿ ಅಸಾಧಾರಣ ಕಾರ್ಯಗಳನ್ನು ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ" ಎಂದು ಶುಭ ಹಾರೈಸಿದ್ದಾರೆ.

Edited By : Vijay Kumar
PublicNext

PublicNext

28/07/2021 12:11 pm

Cinque Terre

40.21 K

Cinque Terre

11

ಸಂಬಂಧಿತ ಸುದ್ದಿ