ಬೆಂಗಳೂರು: ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹಿಂದೆಯೆ ಭವಿಷ್ಯ ನುಡಿದಿದ್ದ ಯತ್ನಾಳ್ ಮಾತು ನಿಜವಾಗಿದ್ದು, ಉತ್ತರ ಕರ್ನಾಟಕ ಮೂಲದ ಲಿಂಗಾಯಿತ ಸಮುದಾಯದ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಾದ ತಪ್ಪನ್ನು ಬೊಮ್ಮಾಯಿ ಮಾಡಲ್ಲ ಎಂಬ ವಿಶ್ವಾಸವಿದೆ ಎಂದು ಯತ್ನಾಳ್ ಹೇಳಿದ್ದಾರೆ. ಕೇಂದ್ರ ನಾಯಕರು ನನಗೆ ಆದೇಶ ನೀಡಿದರೆ ಸಚಿವ ಸ್ಥಾನ ಸ್ವೀಕರಿಸುತ್ತೇನೆ ಹೊರತು ನಾನಾಗಿಯೇ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಡಲ್ಲ. ಸಚಿವ ಸ್ಥಾನ ನೀಡದಿದ್ದರೂ ಶಾಸಕನಾಗಿ ಪ್ರಾಮಾಣಿಕನಾಗಿ ಕೆಲಸ ಮುಂದುವರೆಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ಗಡ್ಡ ತೆಗೆದು ಸ್ಮಾರ್ಟಾಗಿದ್ದೀರಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ನಾನು ಸ್ಮಾರ್ಟ್ ಆಗಿಯೆ ಇದ್ದೇನೆ. ಗಡ್ಡ ಬಿಟ್ಟು ಶಿವಾಜಿಯಾಗಿದ್ದೆ, ಈಗ ಗಡ್ಡ ತೆಗೆದು ಬಸವಣ್ಣನಾಗಿದ್ದೇನೆ ಎಂದು ಹೇಳಿ ನಕ್ಕಿದ್ದಾರೆ.
PublicNext
28/07/2021 01:33 pm