ಬೆಂಗಳೂರು : ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಜಾರಿಮಾಡಿದ್ದಾರೆ. ಹಿರಿಯ ನಾಗರೀಕರಿಗೆ ಸಂದ್ಯಾಸುರಕ್ಷಾ ಯೋಜನೆಯ ಹಣವನ್ನು ರೂ.1,000 ರಿಂದ ರೂ.1,200ಕ್ಕೆ ಹೆಚ್ಚಳ ಮಾಡಿದ್ದಾರೆ.
ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಜನಪರ ಕಾಳಜಿಯಿಂದ ಕೆಲಸ ಮಾಡೋ ಸಲುವಾಗಿ ಸಿಎಂ ಸ್ಥಾನಕ್ಕೆ ಬಂದಿದ್ದೇನೆ. ಇದರ ಮೊದಲ ಭಾಗವಾಗಿ ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷ ವಿದ್ಯಾರ್ಥಿ ವೇತನವನ್ನು ಘೋಷಣೆ ಮಾಡುತ್ತಿದ್ದೇನೆ.
ವಿಧವಾ ವೇತನವನ್ನು 500 ರೂ. ರಿಂದ 800ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ಅಂಗವಿಕಲರ ವೇತನವನ್ನು 600 ರೂ ರಿಂದ 800ಕ್ಕೆ ಏರಿಕೆ ಮಾಡಲಾಗುತ್ತಿದೆ. 3.66 ಸಾವಿರ ಅಂಗವಿಕಲರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂಬುದಾಗಿ ತಿಳಿಸಿದರು.
PublicNext
28/07/2021 02:12 pm