ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಬೆಣ್ಣೆನಗರಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ...!

ದಾವಣಗೆರೆ: ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ಬಿಜೆಪಿ ಮುಖಂಡರು ನಗರದ ಜಯದೇವ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದರು. 30 ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಹೊನ್ನಾಳಿ ಪಟ್ಟಣದಲ್ಲಿಯೂ ಸಂಭ್ರಮ ಮನೆ ಮಾಡಿದೆ.

ಬಿಜೆಪಿ ಕಾರ್ಯಕರ್ತರಿಂದ ಹೊನ್ನಾಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಪಟ್ಟರು. ಹೊನ್ನಾಳಿ ಶಾಸಕ

ಎಂ ಪಿ ರೇಣುಕಾಚಾರ್ಯ ಸಹೋದರ ಎಂ ಪಿ ರಮೇಶ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.ನೂತನ ಮುಖ್ಯಮಂತ್ರಿಗೆ ಹೊನ್ನಾಳಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವನಿಕರು ಖುಷಿ ಹಂಚಿಕೊಂಡರು. ನೂತನ ಸಿಎಂ ಪರ ಘೋಷಣೆಗಳನ್ನು ಹಾಕಿದರು.

Edited By : Manjunath H D
PublicNext

PublicNext

28/07/2021 04:52 pm

Cinque Terre

41.73 K

Cinque Terre

0

ಸಂಬಂಧಿತ ಸುದ್ದಿ