ಬೆಂಗಳೂರು : ಬಿಜೆಪಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮಗೆ ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ಮಾಜಿ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರು ಯಾವ ರೀತಿ ತೀರ್ಮಾನ ಮಾಡುತ್ತಾರೆ. ಅದರ ಮೇಲೆ ನಮ್ಮ ಸಚಿವ ಸ್ಥಾನ ನಿರ್ಧಾರವಾಗಲಿದೆ ಎಂದರು. ನಾವು ಭಾರತೀಯ ಜನತಾಪಕ್ಷ ಮತ್ತು ಯಡಿಯೂರಪ್ಪ ಅವರನ್ನು ನಂಬಿಕೊಂಡು ಬಂದವರು. ನಮಗೆ ಅನ್ಯಾಯ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದರು.
PublicNext
28/07/2021 05:00 pm