ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೆಗಾಸಸ್ ವಿವಾದ: ಸಂಸತ್ ಕಲಾಪದಲ್ಲಿ ಕಾಗದ ತೂರಿದ ವಿಪಕ್ಷಗಳು

ನವದೆಹಲಿ: ಪೆಗಾಸಸ್ ವಿವಾದದ ವಿರುದ್ಧ ಸಂಸತ್ ನಲ್ಲಿ ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳ ಸದಸ್ಯರ ಪ್ರತಿಭಟನೆಯಿಂದ ಲೋಕಸಭೆಯಲ್ಲಿ ಗದ್ದಲ-ಗೊಂದಲ ಉಂಟಾಗಿ ಕಲಾಪವನ್ನು ಕೆಲಕಾಲ ಮುಂದೂಡಲಾಗಿತ್ತು.

ಕಾಂಗ್ರೆಸ್ ನ ಸದಸ್ಯರು ಸಭಾಧ್ಯಕ್ಷರು ಹಾಗೂ ಖಜಾನೆ ಬೆಂಚುಗಳತ್ತ ಕಾಗದಗಳನ್ನು ತೂರಿ ಪ್ರತಿಭಟನೆ ನಡೆಸಿದ್ದರು. ಬೆಳಿಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ತೀವ್ರಗೊಂಡಾಗ ಕಾಂಗ್ರೆಸ್ ಸದಸ್ಯರು ಕಾಗದ ಪತ್ರಗಳನ್ನು ಎಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ನಡೆದಾಗ ಕಲಾಪವನ್ನು ಮುನ್ನಡೆಸುತ್ತಿದ್ದ ರಾಜೇಂದ್ರ ಅಗರ್ವಾಲ್ ನಿಯಮ 377 ಅಡಿಯಲ್ಲಿ ವಿಷಯವನ್ನು ಕೈಗೆತ್ತಿಕೊಂಡಿದ್ದರು. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ 20 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಲಾಗಿತ್ತು.

Edited By : Nagaraj Tulugeri
PublicNext

PublicNext

28/07/2021 05:36 pm

Cinque Terre

58.38 K

Cinque Terre

0

ಸಂಬಂಧಿತ ಸುದ್ದಿ