ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮಂಗಳವಾರ ಮಧ್ಯರಾತ್ರಿ 12.10_ರ ಸುಮಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತ ಸಂಭವಿಸಿದ ರಭಸಕ್ಕೆ ಲಾರಿಯಲ್ಲಿದ್ದ ಮಾವಿನ ಕಾಯಿ ಚೆಲ್ಲಾಪಿಲ್ಲಿಯಾಗಿವೆ. ಇನ್ನು ಮಾವಿನ ಕಾಯಿ ತುಂಬಿಕೊಂಡು
ಚಲಿಸುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿಗೆ ಹಿಂಬದಿಯಲ್ಲಿ ಬಂದ ಗೋವಾದ ಬಸ್ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಖಾಸಗಿ ಬಸ್ ನ ಮುಂಭಾಗದ ಗಾಜು ಪುಡಿ ಪುಡಿಯಾಗಿದ್ದು, ಲಾರಿ ಕ್ಲೀನರ್ ಕಾಲಿಗೆ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಹಿರಿಯೂರು ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
28/07/2021 06:12 pm