ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋನಿಯಾ ಗಾಂಧಿ-ಮಮತಾ ಬ್ಯಾನರ್ಜಿ ಭೇಟಿ

ದೆಹಲಿ : ಪಶ್ಚಿಮ ಬಂಗಾಳ ಚುನಾವಣೆಯ ನಂತರ ಮೊದಲ ಬಾರಿ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದಲೂ ದೆಹಲಿ ಪ್ರವಾಸದಲ್ಲಿರುವ ದೀದಿ ಪ್ರತಿಪಕ್ಷಗಳ ನಾಯಕರ ಭೇಟಿಯಲ್ಲಿ ತೊಡಗಿದ್ದಾರೆ. ಹಾಗೇ ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿಯಾಗಿದ್ದಾರೆ.

ಸೋನಿಯಾ ಗಾಂಧಿಯವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, ನಿಜಕ್ಕೂ ಇದೊಂದು ಅತ್ಯುತ್ತಮವಾದ, ಧನಾತ್ಮಕವಾದ ಭೇಟಿ ಎಂದು ಹೇಳಿದ್ದಾರೆ. ಬಿಜೆಪಿಯನ್ನು ಸೋಲಿಸಲು ಎಲ್ಲ ಪ್ರತಿಪಕ್ಷಗಳೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. ಮಮತಾ ಬ್ಯಾನರ್ಜಿ ನಿನ್ನೆ ಕಾಂಗ್ರೆಸ್ ನಾಯಕರಾದ ಕಮಲನಾಥ್ ಮತ್ತು ಆನಂದ ಶರ್ಮಾರನ್ನೂ ಭೇಟಿಯಾಗಿದ್ದರು.

2024ರ ಲೋಕಸಭೆ ಚುನಾವಣೆ ಹೊತ್ತಿಗೆ ಪ್ರಧಾನಿ ಮೋದಿ ವರ್ಸಸ್ ದೇಶ ಎಂಬಂತೆ ಆಗುತ್ತದೆ. ಈ ಮುಂಗಾರು ಅಧಿವೇಶನ ಮುಗಿಯುತ್ತಿದ್ದಂತೆ ನಾವು ಪ್ರತಿಪಕ್ಷದವರೆಲ್ಲ ಮತ್ತೊಮ್ಮೆ ಒಗ್ಗಟ್ಟಾಗಿ ಕುಳಿತು ಚರ್ಚಿಸುತ್ತೇವೆ ಎಂದಿದ್ದಾರೆ.

Edited By : Nirmala Aralikatti
PublicNext

PublicNext

28/07/2021 06:21 pm

Cinque Terre

73.89 K

Cinque Terre

12

ಸಂಬಂಧಿತ ಸುದ್ದಿ