ನವದೆಹಲಿ: ಪೆಗಾಸಸ್ ಗೂಢಚರ್ಯೆ ಅಸ್ತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವದ ಆತ್ಮದ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಪೆಗಾಸಸ್ ಗೂಢಚರ್ಯೆ ವಿಷಯದ ಬಗ್ಗೆ ಸಂಸತ್ ನಲ್ಲಿ ಪ್ರಧಾನಿ ಅಥವಾ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಚರ್ಚೆ ನಡೆಸುವ ಆಗ್ರಹದಲ್ಲಿ ವಿಪಕ್ಷ ಒಗ್ಗಟ್ಟಿನಿಂದ ಇದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸಂಸತ್ ಕಲಾಪಕ್ಕೆ ಪ್ರತಿಪಕ್ಷಗಳು ಅಡ್ಡಿಯುಂಟುಮಾಡುತ್ತಿವೆ ಎಂಬ ಸರ್ಕಾರದ ಆರೋಪವನ್ನು ರಾಹುಲ್ ಗಾಂಧಿ ತಳ್ಳಿಹಾಕಿದ್ದು, ತಮ್ಮ ಕರ್ತವ್ಯವನ್ನಷ್ಟೇ ಪ್ರತಿಪಕ್ಷಗಳು ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ.
PublicNext
28/07/2021 10:40 pm