ಬೆಂಗಳೂರು: "ಬಿ.ಎಸ್. ಯಡಿಯೂರಪ್ಪ ಅವರ ನೆರಳಾಗಬೇಡಿ' ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಕಿವಿಮಾತು ಹೇಳಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಮಾತಿನಂತೆ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಪಟ್ಟ ನೀಡಲಾಗಿದೆ. ಇದಕ್ಕೆ ಪ್ರತಿಯಾತಿ ಬೊಮ್ಮಾಯಿ ಅವರು, ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನಡೆಯುವುದಾಗಿ ತಿಳಿಸಿದ್ದರು. ಆದರೆ ನೂತನ ಸಿಎಂ ಆಯ್ಕೆಗಾಗಿ ವೀಕ್ಷಕರಾಗಿ ಆಗಮಿಸಿದ್ದ ಧರ್ಮೇಂದ್ರ ಪ್ರಧಾನ್ ಅವರು ಯಾವುದೇ ಒತ್ತಡಗಳಿಗೆ ಒಳಗಾಗದೆ ಕೆಲಸ ಮಾಡುವಂತೆ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಹಿರಿಯ ಮುಖಂಡ ಯಡಿಯೂರಪ್ಪ ಅವರ ಅಪಾರ ಅನುಭವದ ಲಾಭ ಪಡೆಯಿರಿ. ಆದರೆ ಅವರ “ಛಾಯೆ’ಯಂತೆ ವರ್ತಿಸದೆ ನಿಮ್ಮದೇ ನಾಯಕತ್ವ ರೂಪಿಸಿಕೊಳ್ಳಿ ಎಂದು ಧರ್ಮೇಂದ್ರ ಪ್ರಧಾನ್ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.
PublicNext
29/07/2021 08:59 am