ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಷ್ಟೇ ಎತ್ತರಕ್ಕೆ ಬೆಳೆದರೂ ನಾನು ನಿಮ್ಮ ಬಸಣ್ಣನೇ: ಸ್ವಕ್ಷೇತ್ರದ ಜನರಿಗೆ ಬೊಮ್ಮಾಯಿ ಗುಡ್‌ ನ್ಯೂಸ್

ಬೆಂಗಳೂರು: "ಎಷ್ಟೇ ಎತ್ತರಕ್ಕೆ ಬೆಳೆದರೂ ನಾನು ನಿಮ್ಮ ಬಸಣ್ಣನೇ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಂತೆ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಂದಿದ್ದ ಅವರ ಅಭಿಮಾನಿಗಳು ಪುಳಕಿತರಾದರು.

ಬೊಮ್ಮಾಯಿ ಅವರಿಗೆ ಸಿಎಂ ಪಟ್ಟ ಸಿಕ್ಕಿರುವ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಶಿಗ್ಗಾವಿ ಮತ್ತು ಹಾವೇರಿ ಜಿಲ್ಲೆಯಿಂದ ಬಂದಿದ್ದ ಅಭಿಮಾನಿಗಳು ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬುಧವಾರ ಮಧ್ಯಾಹ್ನ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದ್ದರು. ಬೊಮ್ಮಾಯಿ ವೇದಿಕೆಗೆ ಬರುತ್ತಿದ್ದಂತೆ 'ಹಾವೇರಿ ಹುಲಿ'ಗೆ ಜಯವಾಗಲಿ ಎಂದು ಹರ್ಷೋದ್ಗಾರ ಮಾಡಿದರು.

ಈ ವೇಳೆ ಮಾತನಾಡಿದ ಬೊಮ್ಮಾಯಿ ಅವರು, ‘ಶಿಗ್ಗಾವಿ ಕ್ಷೇತ್ರದ ಪ್ರತಿ ಹಳ್ಳಿಯ ಮನೆಗಳಲ್ಲಿ ನಾನಿದ್ದೇನೆ. ಸ್ಥಾನದ ಬಲಕ್ಕಿಂತ ಸೇವೆ ಮಾಡುವುದು ಬಹಳ ಮುಖ್ಯ. ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನತೆಗೆ ವಿಶೇಷ ವ್ಯವಸ್ಥೆ ಮಾಡುತ್ತೇನೆ. ಶಿಗ್ಗಾವಿಯನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ. ರಾಜ್ಯದ ಅಭಿವೃದ್ಧಿಯ ಜತೆಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ನನಗೆ ಶಕ್ತಿ ತುಂಬಿದವರು ನೀವು. ನಿಮ್ಮ ಬೆಂಬಲದಲ್ಲಿ ನನಗೆ ಎಷ್ಟು ಶಕ್ತಿ ಇದೆ ಎನ್ನುವುದೂ ನನಗೆ ಗೊತ್ತಿದೆ. ನನಗೆ ಹೆಗಲಿಗೆ ಹೆಗಲು ಕೊಟ್ಟಿದ್ದೀರಿ. ಹೆಜ್ಜೆಯಲ್ಲಿ ಹೆಜ್ಜೆಯಿಟ್ಟು ಸಾಧನೆ ಮಾಡಿದ್ದೀರಿ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದೇನೆ. ನಿಮ್ಮನ್ನು ಪಡೆದುಕೊಂಡಿರುವುದು ನನ್ನ ಪೂರ್ವಜನ್ಮದ ಪುಣ್ಯ. ನಿಮ್ಮನ್ನೆಲ್ಲ ನೋಡಿದಾಗ ಅತ್ಮವಿಶ್ವಾಸ ಹೆಚ್ಚಾಗುತ್ತದೆ. ಆದಮ್ಯ ಶಕ್ತಿ ಬರುತ್ತದೆ. ನಿಮ್ಮೀ ಶಕ್ತಿ- ಬೆಂಬಲದಿಂದ ಮುಂದೆ ಇಟ್ಟ ಹೆಜ್ಜೆಯನ್ನು ಯಾವತ್ತೂ ಹಿಂದೆ ಇಟ್ಟಿಲ್ಲ’ ಎಂದು ಹೇಳಿದರು.

Edited By : Vijay Kumar
PublicNext

PublicNext

29/07/2021 09:19 am

Cinque Terre

24.68 K

Cinque Terre

5

ಸಂಬಂಧಿತ ಸುದ್ದಿ