ಶಿವಮೊಗ್ಗ: ಜಗದೀಶ್ ಶೆಟ್ಟರ್ ಅವರು ತೆಗೆದುಕೊಂಡ ನಿರ್ಧಾರವನ್ನು ನಾನು ತೆಗೆದುಕೊಳ್ಳುವುದಿಲ್ಲ. ಉಪಮುಖ್ಯಮಂತ್ರಿಯಾಗಲೂ ತಯಾರಿದ್ದೇನೆ, ಸಚಿವನಾಗಲೂ ಸಿದ್ದರಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದರು.
ಪಕ್ಷದ ನಾಯಕರು, ಹೈಕಮಾಂಡ್ ತೀರ್ಮಾನಕ್ಕೆ ನಾನು ತಯಾರಾಗಿದ್ದೇನೆ. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ ಎಂದರು. ಮುಂಬರುವ ಚುನಾವಣೆಗೆ ಈಗಿನಿಂದಲೇ ಪಕ್ಷ ಸಂಘಟನೆ ಮಾಡಬೇಕು. ಸಂಘಟನೆಯ ಶ್ರಮ ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ಈಶ್ವರಪ್ಪ ಹೇಳಿದರು.
PublicNext
29/07/2021 01:44 pm