ಬೆಂಗಳೂರು: ನಾಯಕತ್ವ ಬದಲಾವಣೆಯಿಂದ ಬಿಜೆಪಿಯಲ್ಲಿ ಆಂತರಿಕ ಕಿತ್ತಾಟ ಮತ್ತೊಂದು ಮಗ್ಗುಲಿಗೆ ಹೊರಳಲಿದೆ. ಜಗದೀಶ ಶೆಟ್ಟರ್ ಮುನಿಸಿಕೊಂಡಿದ್ದಾರೆ. ಇತ್ತ ಈಶ್ವರಪ್ಪ ಸೆಟೆದು ಕುಳಿತಿದ್ದಾರೆ. ಸಂಪುಟ ರಚನೆ ಮುಗಿಯುವಷ್ಟರಲ್ಲಿ ಮತ್ತೊಂದಿಷ್ಟು ಬಂಡಾಯಗಾರರು ಸೃಷ್ಟಿಯಾಗುತ್ತಾರೆ. ಒಟ್ಟಿನಲ್ಲಿ ಬಿಜೆಪಿ ಪಕ್ಷದಿಂದ ಸ್ಥಿರ ಸರ್ಕಾರ ಮರೀಚಿಕೆ ಅಷ್ಟೇ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, "ಇಷ್ಟು ದಿನ ಯಾವುದೇ ಬಿಜೆಪಿ ನಾಯಕರನ್ನು ಎಲ್ಲಿದ್ದೀರಿ ಎಂದು ಕೇಳಿದಾಗ ದಿಲ್ಲಿ ದಿಲ್ಲಿ ದಿಲ್ಲಿ... ಎನ್ನುತ್ತಿದ್ದರು. ಈಗ ಖಾತೆ ಆಸೆಗಾಗಿ, ಸಿಎಂ ಮನೆ ಮುಂದೆ ನಿಂತು ಇಲ್ಲಿ ಇಲ್ಲಿ ಇಲ್ಲಿ ಎನ್ನುತ್ತಿದ್ದಾರೆ. ನೆರೆಯಿಂದ ನೊಂದ ರಾಜ್ಯದ ಜನರು ಮಾತ್ರ ಸರ್ಕಾರವನ್ನು ಎಲ್ಲಿ ಎಲ್ಲಿ ಎಲ್ಲಿ ಎಂದು ಕೇಳುತ್ತಿದ್ದಾರೆ" ಎಂದು ಕಾಂಗ್ರೆಸ್ ಕುಟುಕಿದ್ದಾರೆ.
'ಕಳೆದ ಪ್ರವಾಹಗಳಿಗಿಂತ ಈ ಭಾರಿಯ ಪ್ರವಾಹ ಸಂತ್ರಸ್ತರಿಗೆ ಹೆಚ್ಚು ಭೀಕರವಾಗಿದೆ. ಲಾಕ್‌ಡೌನ್‌ನಿಂದ ಆದಾಯದ ಮೂಲವನ್ನು ಕಳೆದುಕೊಂಡ ಜನತೆಗೆ ನೆರೆ ದೊಡ್ಡ ಆಘಾತ ತಂದಿದೆ. ಸಂತ್ರಸ್ತರ ಬಳಿ ಹಣವಿಲ್ಲ. ತಕ್ಷಣದ ಪರಿಹಾರವಾಗಿ 10 ಸಾವಿರ ರೂ. ನೆರವು ನೀಡುವುದು ಅತ್ಯಗತ್ಯ. ಸಂಪುಟ ಸರ್ಕಸ್ಸಿನಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಗಮನಿಸುವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
PublicNext
29/07/2021 03:16 pm