ಯಲ್ಲಾಪುರ: ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನೂ ಇದೇ ವೇಳೆ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರವನ್ನೂ ಪರಿಶೀಲನೆ ಮಾಡಿದರು. ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
PublicNext
29/07/2021 04:55 pm