ಹುಬ್ಬಳ್ಳಿ: ಮಾಜಿ ಸಚಿವ ಜಗದೀಶ್ ಶೆಟ್ಟರ್ ಬಸವರಾಜ ಬೊಮ್ಮಾಯಿ ಸಿಎಂ ಆದ ನಂತರ, ಮರಳಿ ಹುಬ್ಬಳ್ಳಿಗೆ ಆಗಮಿಸಿ ಮಾಧ್ಯಮ ಮುಂದೆ ಮಾತನಾಡಲು ನಿರಾಕರಿಸಿದರು.
ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ ಮುನಿಸಿಕೊಂಡ ಹಿನ್ನೆಲೆ, ಸ್ವತಃ ತಾವೇ ಸಚಿವರಾಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು, ಇಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿ ನಂತರ, ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರು ಮಾತನಾಡಿಸಲು ಮುಂದಾದರು ಕೂಡಾ, ಪ್ರತಿಕ್ರಿಯೆ ನೀಡದೆ ಹಾಗೆಯೇ ತೆರಳಿದರು. ಈ ಮೂಲಕ ಎಲ್ಲೋ ಜಗದೀಶ್ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದರಿಂದ ಮನನೊಂದರಾ ಎಂಬ ಪ್ರಶ್ನೆ ಕಾಡುತ್ತಿದೆ..?
PublicNext
29/07/2021 05:26 pm