ಅಂಕೋಲಾ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿಂದು ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡರು.
ಅಂಕೋಲಾದ ತಾಲೂಕಿನ ಕಚೇರಿಯಿಂದಲೇ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದು, ಸಿಎಂ ಆದ ಬಳಿಕ ಮೊದಲ ವಿಡಿಯೋ ಸಂವಾದ ಇದಾಗಿದ್ದು, ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ನೂತನ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿದರು.
PublicNext
29/07/2021 05:54 pm