ಹುಬ್ಬಳ್ಳಿ: ಪಕ್ಷವನ್ನು ಸಂಘಟನಾತ್ಮಕವಾಗಿ ಕಟ್ಟುವ ದೃಷ್ಟಿಯಿಂದ, ಇಂದು ಮತ್ತೆ ನಾಳೆ ಬೆಳಗಾವಿ ವಿಭಾಗ ಮಟ್ಟದ ಎಲ್ಲ ನಾಯಕರ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿಂದು ಸುದ್ದಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಜನರು ಮನೆ-ಮಠ, ಆಸ್ತಿ-ಪಾಸ್ತಿ ಮತ್ತು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಿಂದ ಮಾಹಿತಿ ಪಡೆಯಲಾಗಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಜನರಿಗೆ ಪರಿಹಾರ ಒದಗಿಸುವ ಕುರಿತು ಸರ್ಕಾರಕ್ಕೆ ಒತ್ತಾಯ ಪಡಿಸಲಾಗುವುದು. ಸಭೆಗೆ ಎಎಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಶಾಸಕಾಂಗ ಪಕ್ಷದ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಕಾಂಗ್ರೆಸ್ ನ ಎಲ್ಲ ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ನಾಳೆ ಪ್ರತ್ಯೇಕವಾಗಿ ಜಿಲ್ಲಾವಾರು ಸಭೆ ನಡೆಸಲಾಗುತ್ತಿದ್ದು, ಮಧು ಬಂಗಾರಪ್ಪ ಕೂಡಾ ನಾಳೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ ಎಂದರು.
PublicNext
29/07/2021 08:10 pm