ಚಿತ್ರದುರ್ಗ: ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಯಡಿಯೂರಪ್ಪ ಅವರದ್ದು ಸಿಂಹಪಾಲಿದೆ. ಆದ್ರೆ ಅವರಿಗೆ ಜೊತೆಯಾಗಿ ಶ್ರಮಿಸಿದ ಪ್ರಮುಖರಲ್ಲಿ ಗೂಳಿಹಟ್ಟಿ ಶೇಖರ್ ಅವರು ಕೂಡ ಒಬ್ಬರು. ಹೀಗಾಗಿ ಅವರಿಗೆ ಮಂತ್ರಿ ಸ್ಥಾನ ಕೊಡಲೇಬೇಕು ಇಲ್ಲದಿದ್ರೆ ಮುಂಬರುವ ತಾ.ಪಂ, ಜಿ.ಪಂ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಅವರ ಅಭಿಮಾನಿಗಳು ಎಚ್ಚರಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಗಾಂಧಿವೃತ್ತದಿಂದ ತಾಲೂಕು ಕಚೇರಿವರೆಗೆ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಗೂಳಿಹಟ್ಟಿ ಶೇಖರ್ ಅಭಿಮಾನಿಗಳು ಹಾಗೂ ಬೆಂಬಲಿಗರು ಬೃಹತ್ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರ ಬೆಂಬಲಿಗ ಚಿತ್ತಯ್ಯ, ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲು ನಿಸ್ವಾರ್ಥದಿಂದ ಕೈಜೋಡಿಸಿದ ಶೇಖರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಅಲ್ಲದೆ ಕಳೆದ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಹ ಇವರಿಗೆ ಸಚಿವ ಸ್ಥಾನ ನೀಡದೇ ಪಕ್ಷ ವಂಚಿಸಿದೆ. ಈ ಬಾರಿ ಮಂತ್ರಿ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
PublicNext
29/07/2021 09:03 pm