ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಹೌದು. ಪಕ್ಷದ ಮುಖಂಡರು, ಬಿಜೆಪಿ ಸಂಸದರ ಜೊತೆಗಿನ ಫೋಟೋವನ್ನು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, "ನನ್ನ ನಿವಾಸದಲ್ಲಿ, ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಅಮರಪ್ಪ, ಶಾಸಕರಾದ ಬಸನಗೌಡ ದದ್ದಲ್, ಪಿ.ಟಿ.ಪರಮೇಶ್ವರ್ ನಾಯಕ್, ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ್ರ, ಮಾಜಿ ಸಚಿವ ಮಲ್ಲಿಕಾರ್ಜುನ್ ನಾಗಪ್ಪ ಅವರನ್ನು ಭೇಟಿ ಮಾಡಿ, ಬೇರುಮಟ್ಟದಿಂದ ಪಕ್ಷ ಬಲಗೊಳಿಸುವ ಬಗ್ಗೆ ಚರ್ಚೆ ನಡೆಸಿದೆವು” ಎಂದು ಬರೆದುಕೊಂಡಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಆದರೆ ಅವರು ಪೋಸ್ಟ್ ಮಾಡಿರುವ ಫೋಟೋದಲ್ಲಿ ಎಲ್ಲಿಯೂ ಕರಡಿ ಸಂಗಣ್ಣ ಅಮರಪ್ಪ ಕಾಣಿಸಿಲ್ಲ. ಅಷ್ಟೇ ಅಲ್ಲದೆ ಕಾಂಗ್ರೆಸ್ನ ಬಲ ಪಡಿಸುವ ಚರ್ಚೆಯಲ್ಲಿ ಭಾಗವಹಿಸಿದ್ದರು ಎಂದು ಡಿಕೆಶಿ ಹೇಳಿರುವುದಕ್ಕೆ ಸಂಗಣ್ಣ ಅವರು ಕಿಡಿ ಕಾರಿದ್ದಾರೆ.
ನಾನು ದೆಹಲಿಯಲ್ಲೇ ಇದ್ದೇನೆ. ಡಿ.ಕೆ.ಶಿವಕುಮಾರ್ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕರಡಿ ಸಂಗಣ್ಣ ಅಮರಪ್ಪ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಡಿಕೆಶಿ ಅವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
PublicNext
30/07/2021 07:36 am