ಹುಬ್ಬಳ್ಳಿ: ನಾನು ಬಂಗಾರಪ್ಪನವರ ಗರಡಿಯಲ್ಲಿ ಬೆಳದವನು. ನನ್ನ ರಾಜಕೀಯ ಗುರುಗಳ ಮಗನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ನನ್ನ ಭಾಗ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಧು ಬಂಗಾರಪ್ಪ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೈತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ ಮುಂತಾದವರು ಅವರಿಗೆ ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಕಳೆದ ಹಲವು ದಿನಗಳಿಂದ ಮಧು ಬಂಗಾರಪ್ಪ ಅವರಿಗೆ ನಾನು ಗಾಳ ಹಾಕಿದ್ದೆ. ಆದರೆ ಆ ಮೀನು ಕಚ್ಚಲಿಲ್ಲ, ಕಚ್ಚಿದ್ದರೆ ಇಷ್ಟೊತ್ತಿಗೆ ಮಾಜಿ ಮಂತ್ರಿಯಾಗಿರುತ್ತಿದ್ದರು. ಆದರೆ ಇವಾಗ ಬಲೆ ಹಾಕಿ ಕರೆದುಕೊಂಡು ಬಂದ್ವಿ ಎಂದರು.
PublicNext
30/07/2021 11:13 am