ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಅಭಿಮಾನಿ ರವಿ ನಿವಾಸಕ್ಕೆ ಇಂದು ಭೇಟಿ ನೀಡಿ, ಆತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಕುಟುಂಬಕ್ಕೆ ಆರ್ಥಿಕ ನೆರವು: ರವಿ ಅವರ ತಾಯಿಯನ್ನು ಭೇಟಿ ಮಾಡಿ ಅವರ ಕಾಲಿಗೆರಗಿ ಸಾಂತ್ವನ ಹೇಳಿದ ಯಡಿಯೂರಪ್ಪ ಅವರು ಸ್ಥಳದಲ್ಲಿ 5 ಲಕ್ಷ ರೂ. ಪರಿಹಾರ ಪ್ರಕಟಿಸಿದರು. ಅಷ್ಟೇ ಅಲ್ಲದೆ ಇನ್ನೂ 5 ಲಕ್ಷ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮೃತ ರವಿಯ ತಾಯಿ ಯಡಿಯೂರಪ್ಪನವರ ಕಾಲಿಗೆ ನಮಸ್ಕರಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‌ವೈ, "ಅಭಿಮಾನ ಅತಿರೇಕಕ್ಕೆ ಹೋಗಿ ಜೀವ ಕಳೆದುಕೊಂಡು, ತಮ್ಮನ್ನೇ ನಂಬಿರುವ ಕುಟುಂಬದವರಿಗೆ ಶಾಶ್ವತ ಶೋಕ ನೀಡಿರುವ ದುರ್ಘಟನೆ ವೈಯಕ್ತಿಕವಾಗಿ ನನಗೆ ಅತ್ಯಂತ ನೋವನ್ನು ತಂದಿದೆ. ಇಂದು ಗುಂಡ್ಲುಪೇಟೆಯ ಬೊಮ್ಮಲಾಪುರದಲ್ಲಿ, ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಅವರ ಮನೆಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು" ಎಂದು ತಿಳಿಸಿದ್ದಾರೆ.
PublicNext
30/07/2021 01:35 pm